BREAKNG : ‘ಜಾತಿ ಗಣತಿ’ ವರದಿ ಅನುಷ್ಠಾನ ವಿಚಾರ : ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲು ರಾಜ್ಯ ಸರ್ಕಾರ ನಿರ್ಧಾರ.!

ಬೆಂಗಳೂರು : ಜಾತಿ ಗಣತಿ ವರದಿ ಅನುಷ್ಠಾನ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಚಿವರು, ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಬಳಿಕ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಜಾತಿ ಗಣತಿ ವರದಿ ಅನುಷ್ಠಾನ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಎಚ್.ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ 2015 ರಲ್ಲಿ ಕೈಗೊಂಡ ಜಾತಿಗಣತಿ ಆಧರಿಸಿ ಜಯಪ್ರಕಾಶ್ ಹೆಗಡೆ ಅವರುಅಂತಿಮ ವರದಿ ಸಲ್ಲಿಸಿದ್ದು, ಇದಕ್ಕೆ ವೀರಶೈವರು, ಒಕ್ಕಲಿಗರು, ಹಿಂದುಳಿದ ವರ್ಗದ ಪ್ರಬಲ ಜಾತಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಜಾತಿಗಣತಿ ವರದಿ ಮಂಡನೆಗೆ ಬಿಜೆಪಿ ಹಾಗೂ ಸ್ವಪಕ್ಷೀಯ ಶಾಸಕರು ವಿರೋಧ ವ್ಯಕ್ತಪಡಿಸಿದ್ದರು. ಸಾರ್ವಜನಿಕರ ಮನೆಮನೆಗೆ ಭೇಟಿ ನೀಡದೇ ವರದಿ ತಯಾರಿಸುವ ಈ ವರದಿ ಬಗ್ಗೆ ವಿಪಕ್ಷಗಳು ಗುಮಾನಿ ವ್ಯಕ್ತಪಡಿಸಿದೆ. ಇದನ್ನು ತಿರಸ್ಕರಿಸಬೇಕೆಂಬ ಒತ್ತಾಯಗಳು ಕೂಡ ಕೇಳಿಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read