HomeLatest Newsಏ.16 ರಿಂದ 'CET' ಪರೀಕ್ಷೆ ಆರಂಭ : 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಏ.16 ರಿಂದ ‘CET’ ಪರೀಕ್ಷೆ ಆರಂಭ : 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬಳ್ಳಾರಿ : ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಏ.16 ಮತ್ತು 17 ರವರೆಗೆ ಸಾಮಾನ್ಯ ಪ್ರವೇಶ (ಸಿಇಟಿ-2025) ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಿ ಆದೇಶಿಸಿದ್ದಾರೆ.
ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular