HomeLatest NewsBREAKING: ಬಿಸಿಯೂಟ ತಯಾರಕರಿಗೆ ಸಿಹಿಸುದ್ದಿ: ಗೌರವಧನ 1 ಸಾವಿರ ರೂ. ಹೆಚ್ಚಳ ಮಾಡಿ ಸರ್ಕಾರ ಆದೇಶ

BREAKING: ಬಿಸಿಯೂಟ ತಯಾರಕರಿಗೆ ಸಿಹಿಸುದ್ದಿ: ಗೌರವಧನ 1 ಸಾವಿರ ರೂ. ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು 1000 ರೂಗಳಷ್ಟು ಹೆಚ್ಚಳ ಮಾಡಲಾಗಿದೆ.

ಮೇಲೆ ಓದಲಾದ ಕ್ರಮಾಂಕ-1ರ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ.ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.

ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ನೀಡಲಾಗುವ ಮಾಸಿಕ ಗೌರವ ಸಂಭಾವನೆಯನ್ನು 2022-23ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ತಲಾ ರೂ 1000/- (ಒಂದು ಸಾವಿರ ರೂಪಾಯಿಗಳು ಮಾತ್ರ) ಗಳಷ್ಟು ಹೆಚ್ಚಿಸಿ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular