ಬೆಂಗಳೂರು: ಭಾರತ -ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಮುಂದೂಡಲಾಗಿದೆ.
ಮೇ 20ರಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಸಿ ಸಾಧನಾ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ಸಾಧನಾ ಸಮಾವೇಶವನ್ನು ಮುಂದೂಡಲು ನಿರ್ಧರಿಸಲಾಗಿದೆ.