HomeKarnatakaBREAKING : ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ : ರಾಜ್ಯ...

BREAKING : ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ : ರಾಜ್ಯ ಸರ್ಕಾರ ಆದೇಶ

ತುಮಕೂರು : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ.  ಪ್ರಕರಣ ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಹೊರ ಬರಲಿದೆ. ಹಲವು ನಾಯಕರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಆ ಹೇಳಿಕೆಗಳ ಬಗ್ಗೆಯೂ ತನಿಖೆ ಮಾಡಬೇಕು. ಸಮಗ್ರ ತನಿಖೆ ಆಗಲು ಸತ್ಯಾಂಶ ಹೊರಬರಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿರೋಳ್ಳಿ ಗ್ರಾಮದ ಬಿಜೆಪಿ  ಕಾರ್ಯಕರ್ತ ಶಿವಕುಮಾರ್ ಪೂಜಾರಿ ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್​ ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಶಿವಕುಮಾರ್ ನೇಣಿಗೆ ಶರಣಾಗಿದ್ದ. ಇದೀಗ ಶಿವಕುಮಾರ್ ಪತ್ನಿ ಮಲ್ಲಮ್ಮ ಅವರು ರೈತ ಆತ್ಮಹತ್ಯೆ ಎಂದು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular