HomeLatest NewsBREAKING: ಐವರು ಸಾಧಕರಿಗೆ ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿ ಘೋಷಣೆ: ಸಿಎಂ ಅಭಿನಂದನೆ

BREAKING: ಐವರು ಸಾಧಕರಿಗೆ ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿ ಘೋಷಣೆ: ಸಿಎಂ ಅಭಿನಂದನೆ

ಬೆಂಗಳೂರು: 2025ನೇ ಸಾಲಿನ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಆಯ್ಕೆ ಮಾಡಲು ದಿನಾಂಕ:03.10.2025 ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ನಿರ್ಣಯಿಸಿರುವಂತೆ, 2025ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ವಿಭಾಗವಾರು ಈ ಕೆಳಕಂಡ 05 ಸಾಧಕರಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲು ಮಂಜೂರಾತಿ ನೀಡಿ ಆದೇಶಿಸಿದೆ.

2025ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ನಾಗರಾಜು ಗಾಣದ ಹುಣಸೆ, ಪಿ.ತಿಪ್ಪೇಸ್ವಾಮಿ, ಜೆ.ಕೆ.ಮುತ್ತಮ್ಮ, ಮಳಸಿದ್ದ ಲಕ್ಷ್ಮಣ ನಾಯಕೋಡಿ ಹಾಗೂ ಕೆ.ಉಚ್ಚಂಗಪ್ಪ ಅವರು ಭಾಜನರಾಗಿದ್ದಾರೆ.

ಪ್ರಶಸ್ತಿ ಪುರಸ್ಕೃತರಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಸಾಹಿತ್ಯ, ಸಂಘಟನೆ, ರಂಗಭೂಮಿ, ಮಾಧ್ಯಮ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಈ ಎಲ್ಲ ಗಣ್ಯರ ಸಾಧನೆ ಸಮಾಜಕ್ಕೆ ಮಾದರಿಯಾಗಲಿ‌ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular