ಬೆಂಗಳೂರು: ಸೈಬರ್ ಕ್ರೈಂ ಪತ್ತೆ ಮಾಡುವುದರಲ್ಲಿ ಕರ್ನಾಟಕ ಮುಂದಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅಪರಾಧ ಪ್ರಕರಣ ನಿಯಂತ್ರಣದಲ್ಲಿದೆ. ಕೊಲೆ, ಸುಲಿಗೆ, ದರೋಡೆ ಕಡಿಮೆಯಾಗಿವೆ. ಸುಳ್ಳು ಸುದ್ದಿ ಹರಡುವುದನ್ನು ನಿಯಂತ್ರಿಸಲು ಕಾನೂನು ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಪೊಲೀಸರ ಟೋಪಿ ಬದಲಾವಣೆ ಮಾಡಲು ಮುಂದಾಗಿದ್ದೇವೆ. ಸಿಎಂ ಸಿದ್ದರಾಮಯ್ಯ ಪಿ ಕ್ಯಾಪ್ ಆಯ್ಕೆ ಮಾಡಿದ್ದಾರೆ. ಪೊಲೀಸರ ಆರೋಗ್ಯ ತಪಾಸಣೆ ಮೊತ್ತ ಹೆಚ್ಚಳ ಮಾಡಲಾಗಿದೆ. ಸುಸಜ್ಜಿತ ಕಮಾಂಡ್ ಸೆಂಟರ್, ಕಂಟ್ರೋಲ್ ರೂಮ್ ಮಾಡಿದ್ದೇವೆ. ಇಡೀ ದೇಶದಲ್ಲೇ ಇಂತಹ ವ್ಯವಸ್ಥೆ ಬೇರೆ ರಾಜ್ಯದಲ್ಲಿ ಇಲ್ಲ. ಕಾನೂನು ಸುವ್ಯವಸ್ಥೆ ಸರಿಯಾಗಿದ್ದಾಗ ಹೂಡಿಕೆದಾರರು ಬರುತ್ತಾರೆ. ದೇಶ ವಿದೇಶಗಳಿಂದ ರಾಜ್ಯಕ್ಕೆ ಬಂಡವಾಳ ಹರಿದು ಬರುತ್ತದೆ. ಮಹಿಳೆಯರ ಸುರಕ್ಷತೆಗಾಗಿ ಸೇಫ್ಟಿ ಐಲ್ಯಾಂಡ್ ನಿರ್ಮಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.