HomeKarnatakaBREAKING: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ತಳ್ಳುಗಾಡಿಗಳಿಗೆ ಬೆಂಕಿ

BREAKING: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ತಳ್ಳುಗಾಡಿಗಳಿಗೆ ಬೆಂಕಿ

ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ.

ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಹಿಂದೂ ಕಾರ್ಯಕರ್ತನ ತಲೆಗೆ ಗಾಯವಾಗಿದೆ. ತಲೆಗೆ ಕಲ್ಲು ಬಿದ್ದು ಪ್ರಕಾಶ್ ಅರಕೇರಿ ಎಂಬುವರ ತಲೆಗೆ ಗಾಯವಾಗಿದ್ದು, ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳ್ಳುಗಾಡಿಗಳಿಗೆ ಬೆಂಕಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಬಳಿಕ ತರಕಾರಿ ಮಾರುಕಟ್ಟೆಯ ಬಳಿ ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಲಾಗಿದೆ. ದುಷ್ಕರ್ಮಿಗಳಿ ಗಾಡಿಗಳಿಗೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ.

ಭದ್ರತೆ ಹೆಚ್ಚಳ, ಪರಿಸ್ಥಿತಿ ನಿಯಂತ್ರಣ: ಎಸ್ಪಿ ಪ್ರತಿಕ್ರಿಯೆ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಮಸೀದಿ ಕಡೆ ಬಂದಾಗ ಎರಡು ಕಲ್ಲುಗಳು ಬಿದ್ದಿದೆ. ಕಲ್ಲು ಸಾರ್ವಜನಿಕರಿಗೆ ಬಿದ್ದಿಲ್ಲ, ಪೊಲೀಸರಿಗೆ ಬಿದ್ದಿದೆ. ಸದ್ಯ ಪರಿಸ್ಥಿತಿ ತಿಳಿಯಾಗಿದೆ ಎಂದು ತಿಳಿಸಿದ್ದಾರೆ.

ನಾವು ವಿಡಿಯೋಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಬಾಗಲಕೋಟೆಯಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಸದ್ಯಕ್ಕೆ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular