HomeLatest NewsBREAKING: ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಗುಂಡು ಹಾರಿಸಿದ್ದ ವಿದ್ಯಾರ್ಥಿ ಅರೆಸ್ಟ್

BREAKING: ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಗುಂಡು ಹಾರಿಸಿದ್ದ ವಿದ್ಯಾರ್ಥಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಬಸವನಗುಡಿಯ ಎಂ.ಎನ್. ಕೃಷ್ಣರಾವ್ ಪಾರ್ಕ್ ನಲ್ಲಿ ವಾಕಿಂಗ್ ಮಾಡುತ್ತಿದ್ದ ಉದ್ಯಮಿ ಮೇಲೆ ಏರ್ ಗನ್ ನಿಂದ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿದ್ಯಾರ್ಥಿಯನ್ನು ಬಸವನಗುಡಿ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಕಾನೂನು ಕಾಲೇಜ್ ವಿದ್ಯಾರ್ಥಿ, ಕೃಷ್ಣರಾವ್ ಪಾರ್ಕ್ ಸಮೀಪದ ನಿವಾಸಿ ಮಹಮ್ಮದ್ ಅಫ್ಜಲ್ ಎಂಬಾತನನ್ನು ಬಂಧಿಸಲಾಗಿದ್ದು, 3 ಏರ್ ಗನ್ ವಶಕ್ಕೆ ಪಡೆಯಲಾಗಿದೆ. ಡಿಸೆಂಬರ್ 10ರಂದು ರಾತ್ರಿ ನರ್ತಕಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ರಾಜಗೋಪಾಲ್ ಸ್ನೇಹಿತರೊಂದಿಗೆ ಉದ್ಯಾನವನದಲ್ಲಿ ವಾಕಿಂಗ್ ಮಾಡುತ್ತಿದ್ದರು.

ಉದ್ಯಾನ ಬಳಿಯ ನಿವಾಸಿ ಆಫ್ಜಲ್ ಏರ್ ಗನ್ ನಿಂದ ಅಭ್ಯಾಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ರಾಜಗೋಪಾಲ್ ಅವರ ಕುತ್ತಿಗೆಗೆ ಹೊಕ್ಕಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲಿಸಿದ ಪೊಲೀಸರಿಗೆ ಸಮೀಪದ ಮನೆಯಿಂದ ಗುಂಡು ಹಾರಿರುವುದು ಗೊತ್ತಾಗಿದೆ. ವಿದ್ಯಾರ್ಥಿಯನ್ನು ಬಂಧಿಸಿ 3 ಏರ್ ಗನ್ ವಶಕ್ಕೆ ಪಡೆಯಲಾಗಿದೆ. ಮನೆಯೊಳಗೆ ಏರ್ ಗನ್ ನಿಂದ ಶೂಟಿಂಗ್ ಅಭ್ಯಾಸ ಮಾಡುವಾಗ ಗುರಿ ತಪ್ಪಿ ಕಿಟಕಿಯಿಂದ ಗುಂಡು ಹೊರಗೆ ಹೋಗಿದೆ ಎನ್ನಲಾಗಿದ್ದು, ಪೊಲೀಸರು ಆರೋಪಿತ ವಿದ್ಯಾರ್ಥಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular