ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಪುನರ್ವಸತಿ ಕೇಂದ್ರದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆಕಾಶ್ ಹೆದ್ದಾರಿ(15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ನೇಣು ಹಾಕಿಕೊಂಡು ಆಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಮಖಂಡಿಯ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಆಕಾಶ್ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಜಮಖಂಡಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

 
			 
		 
		 
		 
		 Loading ...
 Loading ... 
		 
		 
		