HomeLatest NewsBREAKING: ಕಾಲೇಜ್ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

BREAKING: ಕಾಲೇಜ್ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಲಾರೆನ್ಸ್ ಕಾಲೇಜಿನಲ್ಲಿ ಘಟನೆ ನಡೆದಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿ ಆರ್ಯನ್ ಮೋಸಸ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ಕಟ್ಟಡದಿಂದ ಹಾರಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಆರ್ಯ ಕಾಲೇಜು ಸಿಬ್ಬಂದಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಆರ್ಯನ್ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ. ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular