ಮೈಸೂರು: ಮೈಸೂರು ಜಿಲ್ಲೆ ಹುಣಸೂರು ಬಳಿ ಲಕ್ಷ್ಮಣತೀರ್ಥ ನದಿಗೆ ಹಾರಿ ಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಂಜುಂಡಸ್ವಾಮಿ- ಅಂಬುಜಾ ದಂಪತಿಯ ಪುತ್ರಿ ದೀಪಿಕಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹುಣಸೂರು ತಾಲೂಕಿನ ಹರವೆ ಗ್ರಾಮದ ನಿವಾಸಿಯಾಗಿರುವ ದೀಪಿಕಾ ಮೈಸೂರಿನ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ ಬಿಎ ಓದುತ್ತಿದ್ದರು.
ಹುಣಸೂರು ಪಟ್ಟಣದ ಪಂಪ್ ಹೌಸ್ ಸಮೀಪ ತೂಗು ಸೇತುವೆ ಮೇಲಿಂದ ದೀಪಿಕಾ ಲಕ್ಷ್ಮಣತೀರ್ಥ ನದಿಗೆ ಹಾರಿದ್ದಾರೆ. ತನ್ನ ಸಾವಿಗೆ ತಾನೇ ಕಾರಣವೆಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.