HomeUncategorizedBREAKING: ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

BREAKING: ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಾಗ್ಯಶ್ರೀ(18) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಕಲಬುರ್ಗಿಯ ಕೋರ್ಟ್ ವೃತ್ತದ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ಘಟನೆ ನಡೆದಿದೆ. ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ವೈದ್ಯಕೀಯ ಶಿಕ್ಷಣದ ಬಗ್ಗೆ ಬಹಳ ನಿರೀಕ್ಷೆ ಹೊಂದಿದ್ದರು. ಮೇ 3ರಂದು ನೀಟ್ ಪರೀಕ್ಷೆ ಬರೆದಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭಾಗ್ಯಶ್ರೀ ಶೇಕಡ 92 ರಷ್ಟು ಅಂಕ ಪಡೆದಿದ್ದರು. ಕುಟುಂಬ ಸದಸ್ಯರ ಜೊತೆಗೆ ಭಾಗ್ಯಶ್ರೀ ಬಹಳ ಚೆನ್ನಾಗಿಯೇ ಇದ್ದಳು. ಇವಾಗ ಆಕೆಯೇ ಹೋಗಿದ್ದಾಳೆ. ನಾವು ಯಾರ ಮೇಲೆ ದೂರೋಣ ಎಂದು ಆತ್ಮಹತ್ಯೆಗೆ ಶರಣಾದ ಭಾಗ್ಯಶ್ರೀ ತಂದೆ ರಾಜಶೇಖರ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular