ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಹೆಬ್ಬಾಳದ ಮನೋರಾಯನ ಪಾಳ್ಯದಲ್ಲಿ ನಡೆದಿದೆ.
ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ತನುಶ್ರೀ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕೆಜಿ ಹಳ್ಳಿಯಲ್ಲಿರುವ ಅಂಬೇಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ತನುಶ್ರೀ ಮೃತದೇಹ ಇರಿಸಲಾಗಿದೆ.
ಪಿಯುಸಿಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಗೊತ್ತಾಗಿದೆ. ಹೆಬ್ಬಾಳ ಠಾಣೆ ಪೊಲೀಸರಿಗೆ ಮೃತ ತನುಶ್ರೀ ತಾಯಿ ಆಶಾ ಮಾಹಿತಿ ನೀಡಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದರೆ ತಾಯಿಯ ಮೇಲೆ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದು ಎಂಟು ಗಂಟೆಯಾದರೂ ತಾಯಿ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಆದರೆ ರಾತ್ರಿ 10 ಗಂಟೆಯ ನಂತರ ತಾಯಿ ಆಶಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡದೆ ನಾಲ್ಕರಿಂದ ಐದು ಯುವಕರ ಸಹಾಯದಿಂದ ಮೃತದೇಹ ಇಳಿಸಿದ್ದಾರೆ. ಮೃತ ಬಾಲಕಿಯ ತಾಯಿಯ ಮೇಲೆ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದು, ತಾಯಿಯೇ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಶಂಕಿಸಿದ್ದಾರೆ.

