HomeLatest NewsBREAKING: ರ್ಯಾಗಿಂಗ್ ಗೆ ವಿದ್ಯಾರ್ಥಿನಿ ಬಲಿ: ಸಹಪಾಠಿಗಳ ವಿರುದ್ಧ ಡೆತ್ ನೋಟ್ ನಲ್ಲಿ ಉಲ್ಲೇಖ

BREAKING: ರ್ಯಾಗಿಂಗ್ ಗೆ ವಿದ್ಯಾರ್ಥಿನಿ ಬಲಿ: ಸಹಪಾಠಿಗಳ ವಿರುದ್ಧ ಡೆತ್ ನೋಟ್ ನಲ್ಲಿ ಉಲ್ಲೇಖ

ಬಾಗಲಕೋಟೆ: ರ್ಯಾಗಿಂಗ್ ನಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ ಮುಂಡಾಸ ಮೃತಪಟ್ಟವರು ಎಂದು ಹೇಳಲಾಗಿದೆ. ಸಹಪಾಠಿ ವರ್ಷಾ ಮತ್ತು ಪ್ರದೀಪ್ ರ್ಯಾಗಿಂಗ್ ಮಾಡಿರುವುದಾಗಿ ವಿದ್ಯಾರ್ಥಿನಿ ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ.

ಗುಳೇದಗುಡ್ಡದ ಭಂಡಾರಿ ಕಾಲೇಜಿನ ವಿದ್ಯಾರ್ಥಿನಿ ಅಂಜಲಿ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದು, ಸಹಪಾಠಿಗಳ ಕಿರಕುಳಕ್ಕೆ ಬಲಿಯಾಗಿದ್ದಾರೆ. ಡೆತ್ ನೋಟ್ ನಲ್ಲಿ ತಮಗೆ ಕಿರುಕುಳ ನೀಡಿದ ಬಗ್ಗೆ ಉಲ್ಲೇಖಿಸಿರುವ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular