HomeKarnatakaBREAKING: ಶಿವಮೊಗ್ಗದಲ್ಲಿ ಮಾರಿಕಾಂಬ ಹಬ್ಬದ ಹೊತ್ತಲ್ಲೇ ವಿದ್ಯಾರ್ಥಿ ಕೊಲೆ

BREAKING: ಶಿವಮೊಗ್ಗದಲ್ಲಿ ಮಾರಿಕಾಂಬ ಹಬ್ಬದ ಹೊತ್ತಲ್ಲೇ ವಿದ್ಯಾರ್ಥಿ ಕೊಲೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮಾರಿಕಾಂಬ ಜಾತ್ರೆ ವೇಳೆಯಲ್ಲೇ ಅಪ್ರಾಪ್ತರು ಆಘಾತಕಾರಿ ಕೃತ್ಯವೆಸಗಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿಯನ್ನು ಕೊಲೆ ಮಾಡಿದ್ದಾರೆ.

ಸಂಕೇತ್ ಕೊಲೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಘಟನೆ ನಡೆದಿದೆ. ಒಬ್ಬನೇ ಒಬ್ಬ ಪುತ್ರನನ್ನು ಕಳೆದುಕೊಂಡ ಪೋಷಕರು ಕಣ್ಣೀರು ಹಾಕಿದ್ದಾರೆ. ಸೂಳೆಬೈಲಿನ ಸರ್ಕಾರಿ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಸ್ಪೆಷಲ್ ಕ್ಲಾಸ್ ಮುಗಿಸಿ ಹೋಗುತ್ತಿದ್ದಾಗ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ. ಅನ್ಯಧರ್ಮೀಯರು ಸಂಕೇತ್ ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ಥಳಕ್ಕೆ ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿ ಸ್ಪೆಷಲ್ ಕ್ಲಾಸ್ ಇದ್ದ ಕಾರಣ ಮಕ್ಕಳು ಶಾಲೆಗೆ ಬಂದಿದ್ದರು. ಶಾಲೆ ಮುಗಿಸಿ ಹೊರ ಬಂದಾಗ ಮಕ್ಕಳ ನಡುವೆ ಜಗಳವಾಗಿದೆ. ಗಿರೀಶ್ ಎಂಬ ವಿದ್ಯಾರ್ಥಿ ಜತೆಗೆ ಜಗಳವಾಗಿದ್ದು ಸಂಕೇತ್ ಅಲ್ಲಿಗೆ ಹೋದಾಗ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ನಾಲ್ವರು ವಿದ್ಯಾರ್ಥಿಗಳು ಮನಸೋ ಇಚ್ಛೇ ಥಳಿಸಿದ್ದರಿಂದ ಸಂಕೇತ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಯಾರದಾದರೂ ಕೈವಾಡವಿದೆಯಾ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಸಂಕೇತ್ ಹಾಗು ಗಿರೀಶ್ ಸ್ಪೆಷಲ್ ಕ್ಲಾಸ್ ಮುಗಿಸಿ ಸೂಳೆಬೈಲ್ ನ ಹತ್ತಿರ ಬರುತ್ತಿರುವಾಗ ಸಹಪಾಠಿಗಳ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಗಿರೀಶ್ ನನ್ನು ಸಂಕೇತ್ ನ ಬಿಡಿಸಲು ಹೋದಾಗ ಹಲ್ಲೆಗೊಳಗಾಗಿ ತೀವ್ರವಾಗಿ ಗಾಯಗೊಂಡ ಸಂಕೇತ್(15) ನನ್ನು ಆಸ್ಪತ್ರೆಗೆ ಸೇರಿಸುವ ಮಾರ್ಗ ಮದ್ಯೆ ಸಾವು ಕಂಡಿದ್ದಾನೆ. ಆಸ್ಪತ್ರೆಗೆ ಶಾಸಕ ಚನ್ನಬಸಪ್ಪ ದೌಡಾಯಿಸಿದ್ದಾರೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular