HomeLatest NewsBREAKING: ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಮತ್ತೊಂದು ತಿರುವು: ಬೆಳ್ಳಂಬೆಳಗ್ಗೆ ಎಸ್ಐಟಿ ಕಚೇರಿಗೆ ಬಂದ ಸುಜಾತಾ...

BREAKING: ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಮತ್ತೊಂದು ತಿರುವು: ಬೆಳ್ಳಂಬೆಳಗ್ಗೆ ಎಸ್ಐಟಿ ಕಚೇರಿಗೆ ಬಂದ ಸುಜಾತಾ ಭಟ್: ಇಂದು ವಿಚಾರಣೆ

ಬೆಳ್ತಂಗಡಿ: ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸುಜಾತಾ ಭಟ್ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.

ಬೆಂಗಳೂರಿನಿಂದ ಕಾರ್ ನಲ್ಲಿ ಬೆಳ್ತಂಗಡಿಗೆ ಆಗಮಿಸಿದ ಅವರು ಎಸ್ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಎಸ್ಐಟಿ ಕಚೇರಿಗೆ ಸುಜಾತಾ ಭಟ್ ಆಗಮಿಸಿದ್ದಾರೆ. ಇಂದು ಅವರು ವಿಚಾರಣೆ ಎದುರಿಸಲಿದ್ದಾರೆ.

ನನ್ನ ಪುತ್ರಿ ಅನನ್ಯಾ ಭಟ್ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾಳೆ ಎಂದು ಹೇಳಿಕೊಂಡಿದ್ದ ಸುಜಾತಾ ಭಟ್ ನಂತರ ನನಗೆ ಪುತ್ರಿಯೇ ಇಲ್ಲ ಎಂದು ತಿಳಿಸಿದ್ದರು. ಬಳಿಕ ತಮ್ಮ ಹೇಳಿಕೆಯನ್ನೇ ಬದಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 29ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ಅವರು ಮೂರು ದಿನ ಮೊದಲೇ ವಿಚಾರಣೆಗೆ ಆಗಮಿಸಿದ್ದು, ಇದಕ್ಕೆ ಎಸ್ಐಟಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುಜಾತಾ ಭಟ್ ಕಟ್ಟು ಕತೆ ಕಟ್ಟಿರುವುದು ಗೊತ್ತಾಗಿದೆ.

ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಆರಂಭಿಸಿ ಸುಜಾತಾ ಭಟ್ ಅವರಿಗೆ ನೋಟಿಸ್ ನೀಡಿ ಅಗತ್ಯ ದಾಖಲೆಗಳೊಂದಿಗೆ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ಯಾವುದೇ ಉತ್ತರ ನೀಡದ ಸುಜಾತಾ ಭಟ್ ಅನಾರೋಗ್ಯದ ನೆಪವೊಡ್ಡಿ ಆಗಸ್ಟ್ 29ರಂದು ವಿಚಾರಣೆಗೆ ಬರುವುದಾಗಿ ಹೇಳಿದ್ದರು. ಇದೀಗ ದಿಧೀರ್ ವಿಚಾರಣೆಗೆ ಆಗಮಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular