HomeIndiaBREAKING : ಸೂಪರ್ ಸ್ಟಾರ್ 'ರಜನಿಕಾಂತ್' ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್.!

BREAKING : ಸೂಪರ್ ಸ್ಟಾರ್ ‘ರಜನಿಕಾಂತ್’ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್.!

ಸೂಪರ್ ಸ್ಟಾರ್ ನಟ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಚೆನ್ನೈನ ಅಪೋಲೋ ಆಸ್ಪತ್ರೆಯಿಂದ ನಟ ರಜನಿಕಾಂತ್ ಡಿಸ್ಚಾರ್ಜ್ ಆಗಿದ್ದಾರೆ . ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಇಬ್ಬರು ಮೂವರು ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡಿದೆ. ಚಿಕಿತ್ಸೆ ಬಳಿಕ ಸಂಪೂರ್ಣ ಗುಣಮುಖರಾದ ಹಿನ್ನೆಲೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ನಟ ರಜನಿಕಾಂತ್ ಅವರಿಗೆ ಕಳೆದ ಸೋಮವಾರ ತಡರಾತ್ರಿ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2020 ರಲ್ಲಿ ಅಧಿಕ ರಕ್ತದೊತ್ತಡ ನಂತರ ಅವರನ್ನು ಹೈದರಾಬಾದ್ನ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ತಮ್ಮ ರಾಜಕೀಯ ಪಕ್ಷವನ್ನು ಪ್ರಾರಂಭಿಸುವ ಒಂದೆರಡು ದಿನಗಳ ಮೊದಲು ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಆರೋಗ್ಯದ ದೃಷ್ಟಿಯಿಂದ ರಾಜಕೀಯಕ್ಕೆ ಬರುವುದಿಲ್ಲ ಎಂದು ಘೋಷಿಸಿದ್ದರು. ರಜನಿಕಾಂತ್ ಮೂರು ದಿನಗಳ ಕಾಲ ಚಿಕಿತ್ಸೆಗೆ ಒಳಗಾದ ನಂತರ ಅವರು ತಮ್ಮ ಚೆನ್ನೈ ನಿವಾಸಕ್ಕೆ ಮರಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular