ಬೆಂಗಳೂರು : ಬೆಂಗಳೂರಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸೇರಿ 7 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಮನೆಯ ಶೌಚಾಲಯದಲ್ಲಿ ಬಾವರ್ ಅಸ್ಮಾ (29) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಹೆಬ್ಬಾಳದ ಕನಕನಗರದಲ್ಲಿ ಈ ಘಟನೆ ನಡೆದಿದೆ.
ಕಳೆದ 2 ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಮದುವೆ ಆಗಿದ್ದರು. ಆದರೆ ಆತನಿಗೆ ಬೇರೆ ಯುವತಿ ಜೊತೆ ಅನೈತಿಕ ಸಂಬಂಧವಿತ್ತು ಎಂಬ ಆರೋಪವಿದೆ. ಅಸ್ಮಾಳನ್ನು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಮೃತ ಮಹಿಳೆ ಕುಟುಂಬಸ್ಥರು ಆರೋಪಿಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ಬಶೀರ್ ವುಲ್ಲಾನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪತಿ ಸೇರಿ 7 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
You Might Also Like
TAGGED:ಗೃಹಿಣಿ ಅನುಮಾನಾಸ್ಪದ ಸಾವು