ತಮಿಳುನಾಡು : ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ರೋಡ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ, ಎಂಡಿಎಂಕೆಯ ಎ.ಗಣೇಶಮೂರ್ತಿ ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು ಎಂದು ವರದಿ ತಿಳಿಸಿದೆ. ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಅವರನ್ನು ಮಾರ್ಚ್ 24 ರಂದು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಇದಾದ ಬಳಿಕ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

