ಬಾಗಲಕೋಟೆ: ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ನಡೆದಿದ್ದು, ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಶಿಕ್ಷಕಿ ಸಾವನ್ನಪ್ಪಿದ್ದಾರೆ.
ಸಮೀಕ್ಷೆ ಕಾರ್ಯ ಮುಗಿಸಿ ಬರುವಾಗ ಶಿಕ್ಷಕಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದಾನಮ್ಮ ಯಡಹಳ್ಳಿ(51) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೈಕ್ ನಿಂದ ಬಿದ್ದು ಶಿಕ್ಷಕಿ ದಾನಮ್ಮ ಸಾವನ್ನಪ್ಪಿದ್ದಾರೆ.
ಬಾಗಲಕೋಟೆ ತಾಲೂಕಿನ ಬೋಡನಾಯಕನದಿನ್ನಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ರಾಂಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ದಾನಮ್ಮ ಬೈಕ್ ನಿಂದ ಬಿದ್ದು ಮೃತಪಟ್ಟಿದ್ದಾರೆ. ಬಾಗಲಕೋಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಪ್ರಕರಣ ನಡೆದಿದೆ.