HomeLatest NewsBREAKING: ಆಸ್ತಿ ವಿವಾದ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಜಮೀನಿನಲ್ಲೇ ಸೋದರನ ಹತ್ಯೆಗೈದ ಶಿಕ್ಷಕ

BREAKING: ಆಸ್ತಿ ವಿವಾದ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಜಮೀನಿನಲ್ಲೇ ಸೋದರನ ಹತ್ಯೆಗೈದ ಶಿಕ್ಷಕ

ಹಾಸನ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಚ್ಚಿನಿಂದ ಕೊಚ್ಚಿ ಸೋದರನನ್ನು ಕೊಲೆ ಮಾಡಲಾಗಿದೆ. 46 ವರ್ಷದ ದಯಾಕರ್ ಅವರನ್ನು ಜಮೀನಿನಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸೋಂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಂದೆಯ ಕಾಲದ ಆಸ್ತಿಯಲ್ಲಿ ಪಾಲು ಸಂಬಂಧ ದಾಯಾದಿಗಳ ನಡುವೆ ಕಲಹ ಉಂಟಾಗಿತ್ತು.

ಆಸ್ತಿಯಲ್ಲಿ ಹೆಚ್ಚಿನ ಪಾಲು ಕೇಳಿ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದ್ದ. ಕೇಸ್ ವಿಚಾರಣೆಯ ವೇಳೆ ಆಸ್ತಿ ಕೈ ತಪ್ಪುವ ಭೀತಿಯಿಂದ ದಯಾಕರ್ ಅವರನ್ನು ಹತ್ಯೆ ಮಾಡಲಾಗಿದೆ. ತಮ್ಮ ವಶದಲ್ಲಿದ್ದ ಜಮೀನಿನಲ್ಲಿ ಬೆಳೆದಿದ್ದ ಸಿಲ್ವರ್ ಮರಗಳನ್ನು ಕಡಿಸುತ್ತಿದ್ದ. ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿರುವ ಹಿನ್ನೆಲೆ ಮರ ಕಡಿಯದಂತೆ ಒತ್ತಾಯ ಮಾಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಡೆಯಲು ಮುಂದಾದ ದಯಾಕರ್ ಮೇಲೆ ಮಚ್ಚಿನಿಂದ ದಾಳಿ ನಡೆಸಲಾಗಿದೆ. ಜಮೀನಿನಲ್ಲಿ ದಯಾಕರ್ ನನ್ನು ಶಿಕ್ಷಕ ರಾಜಶೇಖರ್ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಪರಾರಿಯಾಗಿದ್ದಾನೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೇಸ್ ದಾಖಲಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular