HomeLatest NewsBREAKING: ವಿದ್ಯಾರ್ಥಿಯನ್ನು ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿದ್ದ ಶಿಕ್ಷಕ ಅಮಾನತು, 2 ದಿನ ನ್ಯಾಯಾಂಗ ಬಂಧನ

BREAKING: ವಿದ್ಯಾರ್ಥಿಯನ್ನು ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿದ್ದ ಶಿಕ್ಷಕ ಅಮಾನತು, 2 ದಿನ ನ್ಯಾಯಾಂಗ ಬಂಧನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಂಸ್ಕೃತ ಶಾಲೆಯಲ್ಲಿ ಕ್ರೌರ್ಯ ಮೆರೆದಿದ್ದ ಮುಖ್ಯ ಶಿಕ್ಷಕ ವೀರೇಶ ಹಿರೇಮಠನನ್ನು ಅಮಾನತುಗೊಳಿಸಲಾಗಿದೆ.

ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ನಾಯಕನಹಟ್ಟಿ ಸಂಸ್ಕೃತ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ವೀರೇಶ ಹಿರೇಮಠ ಹಲ್ಲೆ ನಡೆಸಿದ್ದ. ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿದ್ದ.

ವಿಡಿಯೋ ಬಹಿರಂಗವಾದ ಬಳಿಕ ವೀರೇಶನನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಚಳ್ಳಕೆರೆಯಲ್ಲಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ಎರಡು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎರಡು ದಿನದ ನಂತರ ಓಪನ್ ಕೋರ್ಟ್ ಗೆ ಶಿಕ್ಷಕ ವೀರೇಶ್ ನನ್ನು ಹಾಜರುಪಡಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular