ಬೆಂಗಳೂರು: ಕರ್ನಾಟಕ ಮೂಲದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್, ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಡೇವಿಡ್ ಜಾನ್ಸನ್ ಕೊತ್ತನೂರು ಬಳಿ ಇರುವ ಅಪಾರ್ಟ್ ಮೆಂಟ್ ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿರುವ ಕನಕಶ್ರೀ ಲೇಔಟ್ನಲ್ಲಿರುವ SLV ಪ್ಯಾರಡೈಸ್ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಂದು ಬೆಳಗ್ಗೆ 11.15ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿನೀಡಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
53 ವರ್ಷ ವಯಸ್ಸಿನ ಡೇವಿಡ್ ತಮ್ಮ ವಾಸಸ್ಥಳದ 4ನೇ ಫ್ಲೋರ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕರ್ನಾಟಕದ ಹಾಸನದ ಅರಸೀಕೆರೆ ಮೂಲದವರಾದ ಡೇವಿಡ್ ಜಾನ್ಸನ್ ಅನಾರೋಗ್ಯದಿಂದ ಬಳಲುತ್ತಿದ್ದರು. ಡೇವಿಡ್ ನಿಧನಕ್ಕೆ ಕ್ರಿಕೆಟ್ ಲೋಕದ ದಿಗ್ಗಜರು ಕಂಬನಿ ಮಿಡಿದಿದ್ದಾರೆ.
https://twitter.com/anilkumble1074/status/1803708212040057108?ref_src=twsrc%5Etfw