HomeEntertainmentBREAKING : ತೆಲುಗು ನಟ ರಾಜೇಂದ್ರ ಪ್ರಸಾದ್ ಪುತ್ರಿ 'ಗಾಯತ್ರಿ' ಹೃದಯಾಘಾತದಿಂದ ನಿಧನ.!

BREAKING : ತೆಲುಗು ನಟ ರಾಜೇಂದ್ರ ಪ್ರಸಾದ್ ಪುತ್ರಿ ‘ಗಾಯತ್ರಿ’ ಹೃದಯಾಘಾತದಿಂದ ನಿಧನ.!

ತೆಲುಗು ಚಿತ್ರರಂಗದ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದ’ಯಾಘಾತದಿಂದ ನಿಧನರಾಗಿದ್ದಾರೆ.
ರಾಜೇಂದ್ರ ಪ್ರಸಾದ್ ಅವರ ಮಗಳು ಗಾಯತ್ರಿ ಹೃದಯಾಘಾತದಿಂದ ಶನಿವಾರ ಮುಂಜಾನೆ ನಿಧನರಾದರು. ಅವರಿಗೆ ಕೇವಲ 38 ವರ್ಷ ವಯಸ್ಸಾಗಿತ್ತು. ರಾಜೇಂದ್ರ ಪ್ರಸಾದ್ ಅವರಿಗೆ ಒಬ್ಬ ಮಗ ಮತ್ತು ಒಬ್ಬ ಮಗಳು ಇದ್ದಾರೆ.

ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ. ಮುಂಜಾನೆ 12:40 ರ ಸುಮಾರಿಗೆ ಅವರಿಗೆ ಭಾರಿ ಹೃದಯಾಘಾತವಾಯಿತು, ಚಿಕಿತ್ಸೆ ನೀಡಿದರೂ ಕೂಡ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ  ಎಂದು ಮೂಲಗಳು ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular