BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ದುರ್ಮರಣ

ಬೆಳಗಾವಿ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದ ನಂದಗಡ ಬಳಿ   ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, 9 ಮಂದಿ ಪ್ರಯಾಣಿಕರ ಪೈಕಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮದುವೆ ಮುಗಿಸಿ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತರು ಮಹಾರಾಷ್ಟ್ರ ಮೂಲದವರು ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read