BREAKING : ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ ವೇಯಲ್ಲಿ ಭೀಕರ ಅಪಘಾತ : 7 ಮಂದಿ ಸಾವು, ಐವರಿಗೆ ಗಾಯ

ಮುಂಬೈ-ನಾಗ್ಪುರ  ಎಕ್ಸ್ ಪ್ರೆಸ್ ವೇಯಲ್ಲಿ 2 ಕಾರುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಐದು ಮಂದಿ ಗಾಯಗೊಂಡಿದ್ದಾರೆ.

ಮುಂಬೈನಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಜಲ್ನಾ ಜಿಲ್ಲೆಯ ಸಮೃದ್ಧಿ ಹೆದ್ದಾರಿಯ ಕಡ್ವಾಂಚಿ ಗ್ರಾಮದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ.

ರಾತ್ರಿ 11 ಗಂಟೆ ಸುಮಾರಿಗೆ ಇಂಧನ ತುಂಬಿದ ನಂತರ ರಾಂಗ್ ಸೈಡ್ ನಿಂದ ಹೆದ್ದಾರಿಗೆ ಪ್ರವೇಶಿಸಿದ ಸ್ವಿಫ್ಟ್ ಡಿಜೈರ್ ನಾಗ್ಪುರದಿಂದ ಮುಂಬೈಗೆ ತೆರಳುತ್ತಿದ್ದ ಎರ್ಟಿಗಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾರಿಬಿದ್ದಿದೆ.
ಭೀಕರ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ರಕ್ತಸಿಕ್ತ ದೇಹಗಳು ಹೆದ್ದಾರಿಯಲ್ಲಿ ಬಿದ್ದಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read