
ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಡಿಕ್ಕಿ ಹೊಡೆದಿದ್ದು, ಟಾಟಾ ಸುಮೋದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು . ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನರೇಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

