HomeIndiaBREAKING : ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ ; ಸ್ಥಳದಲ್ಲೇ 6 ಮಂದಿ ದುರ್ಮರಣ

BREAKING : ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ ; ಸ್ಥಳದಲ್ಲೇ 6 ಮಂದಿ ದುರ್ಮರಣ

ನವದೆಹಲಿ : ಹರಿಯಾಣದ ರೇವಾರಿಯಲ್ಲಿ ಭಾನುವಾರ ತಡರಾತ್ರಿ ನಿಲ್ಲಿಸಿದ್ದ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದು ನಂತರ ಪಲ್ಟಿಯಾದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ.

ಮಸಾನಿ ಗ್ರಾಮದ ಸರ್ಕಾರಿ ಶಾಲೆಯ ಬಳಿ ಈ ಅಪಘಾತ ಸಂಭವಿಸಿದೆ. ಎಕ್ಸ್ ಯುವಿ ಕಾರು ಖಟೂ ಗ್ರಾಮದಿಂದ ದೆಹಲಿಗೆ ಮರಳುತ್ತಿತ್ತು. ಘಟನೆಯಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ.
ಖಾರ್ಖಾರಾ ಗ್ರಾಮದ ಬಳಿ ಕಾರೊಂದನ್ನು ನಿಲ್ಲಿಸಿಕೊಂಡು ಟೈರ್ ಬದಲಾಯಿಸುತ್ತಿದ್ದಾಗ ಎಕ್ಸ್ ಯುವಿ ಕಾರು ಆ ಕಾರಿಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟು, 6 ಮಂದಿಗೆ ಗಂಭೀರ ಗಾಯಗಳಾಗಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular