
ಬಿಇ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ನದಿಗೆ ಈಜಲು ತೆರಳಿದ್ದರು. ಆದರೆ ದುರಾದೃಷ್ಟವಶಾತ್ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪೊನ್ನಂಪೇಟೆಯ ಸಿಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

