BREAKING : ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ 16 ನೇ ಹಣಕಾಸು ಸಭೆಯ ಹೈಲೆಟ್ಸ್ ಹೀಗಿದೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಹಣಕಾಸು ಸಭೆ ನಡೆದಿದೆ. 6ನೇ ಹಣಕಾಸು ಆಯೋಗದವರೊಂದಿಗೆ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ. ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ ₹5,000 ಕೋಟಿ ಯಂತೆ ಐದು ವರ್ಷಕ್ಕೆ ₹25,000 ಕೋಟಿ ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು ₹55,000 ಕೋಟಿ ವೆಚ್ಚವಾಗಲಿದ್ದು, ಈ ಮೊತ್ತದಲ್ಲಿ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ.

ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು. ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 4.713 ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66% ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ. ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿ ಅವರು ತೆರಿಗೆ ಹಂಚಿಕೆಯಲ್ಲಿ ಶೇ. 50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು. ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ, ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸ ನನಗಿದೆ ಎಂದರು.

https://twitter.com/siddaramaiah/status/1829099551547850935

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read