HomeKarnatakaBREAKING : ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ ವ್ಯಕ್ತಿ

BREAKING : ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ ವ್ಯಕ್ತಿ

ಬೆಂಗಳೂರು : ಜನಸ್ಪಂದನ’ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಕ್ತಿಯೋರ್ವ ಧಿಕ್ಕಾರ ಕೂಗಿದ ಘಟನೆ ನಡೆದಿದೆ.

ನಾನು ಬೆಳಗ್ಗೆಯಿಂದ 10:30 ರಿಂದ ಕಾಯುತ್ತಾ ಇದ್ದೇನೆ, ನನ್ನನ್ನು ಇನ್ನೂ ಬಿಡಲಿಲ್ಲ ಎಂದು ವ್ಯಕ್ತಿಯೋರ್ವ ಧಿಕ್ಕಾರ ಕೂಗಿದ್ದಾನೆ. ಗೃಹಲಕ್ಷ್ಮಿ ಅರ್ಜಿ ಸಲ್ಲಿಸುವ ಬಗ್ಗೆ ಸಮಸ್ಯೆ ಬಗ್ಗೆ ಹೇಳಿಕೊಳ್ಳಲು ಬಂದ ವ್ಯಕ್ತಿಗೆ ಅವಕಾಶ ಸಿಗದಿದ್ದಕ್ಕೆ ವ್ಯಕ್ತಿಯೋರ್ವ ಧಿಕ್ಕಾರ ಕೂಗಿದ ಪ್ರಸಂಗ ನಡೆದಿದೆ.

ಸಾವಿರಾರು ಸಂಖ್ಯೆಯಲ್ಲಿ ಜನರು ತಮ್ಮ ಅಹವಾಲುಗಳನ್ನು ಹೊತ್ತು ಜನಸ್ಪಂದನಕ್ಕೆ ಆಗಮಿಸಿದ್ದಾರೆ. ಇಂದು ಸಂಜೆ 6 ಗಂಟೆವರೆಗೆ ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಬಾರಿಯ ಜನಸ್ಪಂದನದ ಅಭೂತಪೂರ್ವ ಯಶಸ್ಸು ಈ ಬಾರಿ ನಿರೀಕ್ಷೆಗೂ ಮೀರಿದಷ್ಟು ಜನರನ್ನು ಕರೆತಂದಿದೆ. ಎಲ್ಲರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುತ್ತೇವೆ, ಆಗಮಿಸಿರುವ ಬಂಧುಗಳು ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೆ ನಮ್ಮೊಂದಿಗೆ ಸಹಕರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular