HomeKarnatakaBREAKING : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ದಾಖಲಾಗಿದ್ದ 'ಪೋಕ್ಸೋ ಕೇಸ್' ವಾಪಸ್ ಪಡೆದ ಸಂತ್ರಸ್ತೆ ತಾಯಿ.!

BREAKING : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ದಾಖಲಾಗಿದ್ದ ‘ಪೋಕ್ಸೋ ಕೇಸ್’ ವಾಪಸ್ ಪಡೆದ ಸಂತ್ರಸ್ತೆ ತಾಯಿ.!

ಬೆಳಗಾವಿ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್ ನ್ನು ವಾಪಸ್ ಪಡೆಯಲಾಗಿದೆ.

ಕಂಡಕ್ಟರ್ ಮಹದೇವಪ್ಪ ಅವರ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್ ನ್ನು ಸಂತ್ರಸ್ತೆ ತಾಯಿ ವಾಪಸ್ ಪಡೆದುಕೊಂಡಿದ್ದು, ಈ ವಿಚಾರವನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.

ಎರಡು ದಿನಗಳ ಹಿಂದೆ ಕೆ.ಎಸ್.ಆರ್ ಟಿ.ಸಿ ಬಸ್ ನಲ್ಲಿ ಟಿಕೆಟ್ ಕೊಡುವ ವೇಳೆ ಕಂಡಕ್ಟರ್ ಮಹದೇವಪ್ಪ ತನಗೆ ಮರಾಠಿ ಬರಲ್ಲ ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದಕ್ಕೆ ಬಸ್ ನಲ್ಲಿದ್ದ ಮರಾಠಿ ಪುಂಡರು ಕಂಡಕ್ಟರ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿ, ಮರಾಠಿ ಮಾತನಾಡುವಂತೆ ಒತ್ತಾಯಿಸಿದ್ದರು. ಹಲ್ಲೆಗೊಳಗಾದ ಕಂಡಕ್ಟರ್ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮರಾಠಿ ದುರುಳರು ನಿರ್ವಾಹಕನ ವಿರುದ್ಧ ಪಿತೂರಿ ಮಾಡಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟರ್ ಅವರ ತಲೆದಂಡವಾಗಿದೆ. ಮಾರಿಹಾಳ ಠಾಣೆಯಿಂದ ಬೆಳಗಾವಿಯ ಸಿಸಿಆರ್ ಬಿಗೆ ಗುರುರಾಜ್ ಅವರನ್ನು ವರ್ಗಾವಣೆ ಮಾಡಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಆದೇಶ ಹೊರಡಿಸಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular