BREAKING : ಪೊಲೀಸ್ ಇಲಾಖೆಗೆ 258, ಲೋಕಾಯುಕ್ತಕ್ಕೆ 266 ಹುದ್ದೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಪೊಲೀಸ್ ಇಲಾಖೆಗೆ 258 ಹುದ್ದೆ, ಲೋಕಾಯುಕ್ತಕ್ಕೆ 266 ಹುದ್ದೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮಂಜೂರಾಗಿದ್ದ 524 ಪೊಲೀಸ್ ಅಧಿಕಾರಿಗಳು/ಪೊಲೀಸ್ ಸಿಬ್ಬಂದಿ/ಲಿಪಿಕ ಸಿಬ್ಬಂದಿ ಹುದ್ದೆಗಳ ಪೈಕಿ ಈ ಕೆಳಕಂಡ ಪಟ್ಟಿಯಲ್ಲಿರುವಂತೆ 266 ಅಧಿಕಾರಿ/ಸಿಬ್ಬಂದಿ ಹುದ್ದೆಗಳನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಹಾಗೂ ಬಾಕಿ ಉಳಿದಿರುವ 258 ಹುದ್ದೆಗಳನ್ನು ಪೊಲೀಸ್ ಇಲಾಖೆಗೆ ವರ್ಗಾಯಿಸಿ ಆದೇಶಿಸಲಾಗಿದೆ.

ಅದೇ ರೀತಿ ಮೇಲೆ ಸರ್ಕಾರದ ಆದೇಶದಲ್ಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮಂಜೂರಾಗಿದ್ದ ಪೊಲೀಸೇತರ ಅಧಿಕಾರಿ/ಸಿಬ್ಬಂದಿ ಹುದ್ದೆಗಳ ಪೈಕಿ 64 ಹುದ್ದೆಗಳನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಇವರ ಪ್ರಸ್ತಾವನೆಯ ಮೇರೆಗೆ ವರ್ಗಾಯಿಸಿ ಸರ್ಕಾರ ಅದೇಶಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read