ಬೆಂಗಳೂರು : ರಾಜ್ಯದಲ್ಲಿರುವ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿರುವ/ಮುಕ್ತಾಯಗೊಳ್ಳಲಿರುವ ಸಹಕಾರ ಸಂಘಗಳು/ಸಹಕಾರ ಬ್ಯಾಂಕುಗಳ (ಪ್ರಾಥಮಿಕ, ಮಾಧ್ಯಮಿಕ /ಒಕ್ಕೂಟಗಳ (ಫೆಡರಲ್ ಸಂಸ್ಥೆ) ಮತ್ತು ಅಪೆಕ್ಸ್ ಸಹಕಾರ ಸಂಘಗಳ) ಚುನಾವಣೆಗಳನ್ನು ಮುಂದೂಡಿ ಸರ್ಕಾರ ಆದೇಶ ಹೊರಡಿಸಿತ್ತು, ಇದೀಗ ಕಾರಣಾಂತರಗಳಿಂದ ಎಲ್ಲಾ ಸಹಕಾರ ಸಂಘ, ಬ್ಯಾಂಕ್ ಗಳ ಚುನಾವಣೆ ಮುಂದೂಡಿಕೆ ಆದೇಶ ವಾಪಸ್ ಪಡೆದು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿರುವ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿರುವ/ಮುಕ್ತಾಯಗೊಳ್ಳಲಿರುವ ಸಹಕಾರ ಸಂಘಗಳು/ಸಹಕಾರ ಬ್ಯಾಂಕುಗಳ (ಪ್ರಾಥಮಿಕ, ಮಾಧ್ಯಮಿಕ /ಒಕ್ಕೂಟಗಳ (ಫೆಡರಲ್ ಸಂಸ್ಥೆ) ಮತ್ತು ಅಪೆಕ್ಸ್ ಸಹಕಾರ ಸಂಘಗಳ) ಚುನಾವಣೆಗಳನ್ನು ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 28ಎ(5), 28ಬಿ, 29ಎಫ್(4) 39(ಎ)ಗೆ ವಿನಾಯಿತಿ ನೀಡಿ ಮುಂದಿನ ಆದೇಶದವರೆಗೆ ಚುನಾವಣೆಗಳನ್ನು ಮುಂದೂಡಿ ಹಾಲಿ ಇರುವ ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳ ಅವಧಿಯನ್ನು ಮುಂದುವರಿಸಿರುವ ಸರ್ಕಾರದ ಆದೇಶ ಸಂಖ್ಯೆ:ಸಿಒ 34 ಸಿಎಲ್‌ಎಂ 2024, ದಿನಾಂಕ:13.03.2024ರ ಆದೇಶವನ್ನು ಈ ಕೂಡಲೇ ಜಾರಿಗೆ ಬರುವಂತೆ ಹಿಂಪಡೆದು ಆದೇಶಿಸಿದೆ.