ಹೈದರಾಬಾದ್: ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಡಪಲ್ಲಿ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ನಟ ಅಲ್ಲು ಅರ್ಜುನ್ ಸೇರಿದಂತೆ 23 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಅಲ್ಲು ಅರ್ಜುನ್, ಮ್ಯಾನೇಜರ್, ವೈಯಕ್ತಿಕ ಸಿಬ್ಬಂದಿ ಹಾಗೂ ಎಂಟು ಬೌನ್ಸರ್ ಗಳ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸಂಧ್ಯಾ ಥಿಯೇಟರ್ ಆಡಳಿತ ಮಂಡಳಿ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ. ಚಿತ್ರಮಂದಿರದ ಮಾಲೀಕರು, ವ್ಯವಸ್ಥಾಪಕರ ವಿರುದ್ಧವೂ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟಿದ್ದರು. ಮಗನಿಗೆ ಗಂಭೀರ ಗಾಯವಾಗಿತ್ತು.

