ಕೊಪ್ಪಳ: ಯಾವ ನವೆಂಬರ್ ಕ್ರಾಂತಿಯೂ ಇಲ್ಲ, 2028ರ ವರೆಗೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇರುತ್ತಾರೆ ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, 2028ರ ನಂತರ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ. ಡಿ.ಕೆ. ಶಿವಕುಮಾರ್ ಪಕ್ಷಕ್ಕೆ ಶ್ರಮಪಟ್ಟಿದ್ದಾರೆ, ಪಕ್ಷಕ್ಕಾಗಿ ದುಡಿದಿದ್ದಾರೆ. ಅವರು ಮುಖ್ಯಮಂತ್ರಿ ಆಗಬೇಕು ಎಂದು ನಮಗೂ ಆಸೆ ಇದೆ. ಡಿ.ಕೆ. ಶಿವಕುಮಾರ್ ಗೂ ಆಸೆ ಇದೆ. ಆದರೆ ಸಿದ್ದರಾಮಯ್ಯ ಅವಧಿ ಮುಗಿದ ನಂತರ ಡಿಕೆ ಮುಖ್ಯಮಂತ್ರಿ ಆಗಲಿ ಎಂದು ಹೇಳಿದ್ದಾರೆ
ಅಭಿಮಾನಿಗಳಿಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ. ನಮಗೂ ಆಸೆ ಇದೆ. ಸಿದ್ದರಾಮಯ್ಯ 2028ರ ವರೆಗೂ ಮುಖ್ಯಮಂತ್ರಿ ಆಗಿರುತ್ತಾರೆ. ನಂತರ ಡಿಕೆ ಮುಖ್ಯಮಂತ್ರಿ ಆಗಲಿ. ಈ ವಿಚಾರವನ್ನು ಡಿ.ಕೆ. ಶಿವಕುಮಾರ್ ಕೂಡ ಹೇಳಿದ್ದಾರೆ. ಸಿದ್ದರಾಮಯ್ಯ ಕೂಡಲ ದಸರಾ ಸಮಯದಲ್ಲಿ ಹೇಳಿದ್ದರು. ಈ ವಿಚಾರಕ್ಕೆ ಡಿ.ಕೆ. ಶಿವಕುಮಾರ್ ಕೂಡ ಸರಿ ಅಂದಿದ್ದಾರೆ ಎಂದು ಕೊಪ್ಪಳದಲ್ಲಿ ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ.
