BREAKING : ʻಜಮೀನಿಗೆ ಹೋಗಲು ದಾರಿ ಇಲ್ಲʼ, ʻಜನತಾ ದರ್ಶನʼದಲ್ಲಿ ದೂರು ಸಲ್ಲಿಸಿದ ರೈತ : ತ್ವರಿತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಮೀನಿಗೆ ಹೋಗಲು ದಾರಿ ಇಲ್ಲ ಎಂದು ರೈತರೊಬ್ಬರ ಸಮಸ್ಯೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಚನ್ನಪಟ್ಟಣ ತಾಲ್ಲೂಕು ಮಳೂರು ಗ್ರಾಮದ ಜಮೀನುಗಳಿಗೆ ರಸ್ತೆ ನಿರ್ಮಾಣ ಕಾರ್ಯವನ್ನು ಗ್ರಾಮಪಂಚಾಯಿತಿಯವರು ಅರ್ಧಕ್ಕೆ ಸ್ಥಗಿತಗೊಳಿಸಿರುವುದರಿಂದ, ಎತ್ತಿನಗಾಡಿ ಹೊಡೆದುಕೊಂಡು ಹೋಗಿ ಕೃಷಿ ಚಟುವಟಿಕೆ ನಡೆಸಲು ತೊಂದರೆಯಾಗಿದೆ ಎಂದು ರೈತರೊಬ್ಬರು ಜನತಾ ದರ್ಶನದಲ್ಲಿ ದೂರು ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಆನ್ ಲೈನ್ ಮೂಲಕ ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಂಡು, ಆದ್ಯತೆ ಮೇರೆಗೆ ಅನ್ನದಾತನ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read