ಚಿಕ್ಕಮಗಳೂರು: ದುಷ್ಕರ್ಮಿಗಳು ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವನ್ನು ಕದ್ದೊಯ್ದು ಕೊಂದು ಹಾಕಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದಲ್ಲಿ ಘಟನೆ ನಡೆದಿದೆ.
ಅಸ್ಸಾಂ ಮೂಲದ ಕಾಫಿ ತೋಟದ ಕಾರ್ಮಿಕರು ಕೃತ್ಯವೆಸಗಿದ್ದಾರೆ. ಹಸುವನ್ನು ಕೊಂದು ಮಾಂಸ ಬೇರ್ಪಡಿಸುವಾಗ ಪೊಲೀಸರು ದಾಳಿ ಮಾಡಿದ್ದಾರೆ. ಆರು ಜನರನ್ನು ಬಾಳೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಜೀರ್ ಅಕ್ಮಲ್, ಅಕ್ಕಸ್ ಅಲಿ, ನಜರ್ ಅಲಿ, ಮಂಜುಲ್ ಹಕ್, ಮೆಹರ್ ಅಲಿ ಸೇರಿ 6 ಮಂದಿಯನ್ನು ಬಂಧಿಸಲಾಗಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.