HomeLatest NewsBREAKING: ಮನೆ ಮಾಲೀಕ ಬಂದರೂ ವಿಚಲಿತರಾಗದೇ ಚಿನ್ನಾಭರಣ ಕದ್ದೊಯ್ದ ಕಳ್ಳರು…!

BREAKING: ಮನೆ ಮಾಲೀಕ ಬಂದರೂ ವಿಚಲಿತರಾಗದೇ ಚಿನ್ನಾಭರಣ ಕದ್ದೊಯ್ದ ಕಳ್ಳರು…!

ಮೈಸೂರು: ಮನೆಯ ಹಿಂಬದಿ ಬಾಗಿಲಿನಿಂದ ನುಗ್ಗಿ ಚಿನ್ನಾಭರಣ ಕಳವು ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಚಾಮುಂಡಿ ಟೌನ್ ಶಿಪ್ ನಲ್ಲಿ ಘಟನೆ ನಡೆದಿದೆ.

ಮನೆಯ ಬೀಗ ಮುರಿದು 80 ಗ್ರಾಂ ಚಿನ್ನ, ಬೆಳ್ಳಿ, 1.40 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಖಾಸಗಿ ಕಂಪನಿ ಉದ್ಯೋಗಿ ಪುನೀತ್ ಕುಮಾರ್ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಮನೆ ಮಾಲೀಕರು ಬಂದರೂ ಕಳ್ಳರು ವಿಚಲಿತರಾಗಿಲ್ಲ. ಮನೆ ಮಾಲೀಕರ ಮುಂದೆಯೇ ಕಾರ್ ನಲ್ಲಿ ಕಳ್ಳರು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular