HomeKarnatakaBREAKING : ರಾಜ್ಯದಲ್ಲಿ ಮತ್ತೊಮ್ಮೆ 'ಪಡಿತರ ಚೀಟಿ' ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಹೆಚ್ ಮುನಿಯಪ್ಪ

BREAKING : ರಾಜ್ಯದಲ್ಲಿ ಮತ್ತೊಮ್ಮೆ ‘ಪಡಿತರ ಚೀಟಿ’ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು : ರಾಜ್ಯದಲ್ಲಿ ಮತ್ತೊಮ್ಮೆ ಪಡಿತರ ಚೀಟಿ ಪರಿಷ್ಕರಣೆಗೆ ಚಿಂತನೆ ನಡೆಸಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು ನಿಜವಾದ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಸಿಗಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಸದನದ ಸದಸ್ಯರೆಲ್ಲರೂ ಸಹಕಾರ ಕೊಟ್ಟರೆ ಬಿಪಿಎಲ್ ಪಡೆದುಕೊಂಡ ಅನರ್ಹ ಫಲಾನುಭವಿಗಳ ಪರಿಷ್ಕರಣೆ ಕಾರ್ಯ ಪ್ರಾರಂಭವಾಗಲಿದೆ. . 99 ಎಪಿಎಲ್ ಕಾರ್ಡ್ ಗಳು ಬಿಪಿಎಲ್ ಸೇರ್ಪಡೆಯಾದರೆ ಯಾರೂ ಕೇಳುವುದಿಲ್ಲ. ಆದರೆ ಒಂದೇ ಒಂದು ಬಪಿಎಲ್ ಕಾರ್ಡ್ ಬಿಟ್ಟು ಹೋದರೆ ದೊಡ್ಡ ವಿವಾದವನ್ನೇ ಸೃಷ್ಟಿ ಮಾಡುತ್ತಾರೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮತ್ತೊಮ್ಮೆ ಪಡಿತರ ಚೀಟಿ ಪರಿಷ್ಕರಣೆಗೆ ಚಿಂತನೆ ನಡೆಸಲಾಗಿದೆ, ಇದಕ್ಕೆ ಸಹಕಾರ ಬೇಕು ಎಂದರು. ಇತ್ತೀಚೆಗೆ ಸರ್ಕಾರ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿತ್ತು, ಸರ್ಕಾರದ ನಡೆಗೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತಗೊಳಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೇಷನ್ ಕಾರ್ಡ್ ತಿದ್ದುಪಡಿ

ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಜ.31 ರವರೆಗೆ ಆಹಾರ ಇಲಾಖೆ ಅವಕಾಶ ನೀಡಿತ್ತು, ಇದೀಗ ಇದನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರೇಷನ್ ಕಾರ್ಡ್ ಸೇರ್ಪಡೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಸಂಬಂಧ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ತಿದ್ದುಪಡಿ ಮಾಡಿಕೊಳ್ಳುವವರು ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಅಗತ್ಯ ದಾಖಲೆಯೊಂದಿಗೆ ತೆರಳಿ ಆನ್ಲೈನ್ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕು. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಪಡಿತರ ಚೀಟಿ ತಿದ್ದುಪಡಿ ಮಾಡಿರುವವರು ಇತ್ತೀಚಿನ ವಿದ್ಯುತ್ ಬಿಲ್ಲಿನಲ್ಲಿ ನಮೂದಿಸಿರುವ ವಿದ್ಯುತ್ ಮೀಟರ್ ಆರ್ಆರ್ ಸಂಖ್ಯೆ ಮತ್ತು ಲೊಕೇಷನ್ ಕೋಡ್ ನೀಡುವುದು ಕಡ್ಡಾಯ ಮಾಡಲಾಗಿದೆ.

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ.ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ. ವಿದ್ಯುತ್ ಬಿಲ್ ದಾಖಲೆ ನೀಡಬೇಕು. ಪಡಿತರ ಚೀಟಿ ತಿದ್ದುಪಡಿ ಮಾಡಿರುವವರು ಇತ್ತೀಚಿನ ವಿದ್ಯುತ್ ಬಿಲ್ಲಿನಲ್ಲಿ ನಮೂದಿಸಿರುವ ವಿದ್ಯುತ್ ಮೀಟರ್ ಆರ್ಆರ್ ಸಂಖ್ಯೆ ಮತ್ತು ಲೊಕೇಷನ್ ಕೋಡ್ ನೀಡುವುದು ಕಡ್ಡಾಯ ಮಾಡಲಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular