HomeKarnatakaBREAKING: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಮೂವರು ವಶಕ್ಕೆ

BREAKING: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಮೂವರು ವಶಕ್ಕೆ

ಬೆಂಗಳೂರು: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಡಿವಾಳ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ, ಸುಧಾಕರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಪರೀಕ್ಷಾ ಕೇಂದ್ರದ ಇನ್ ಚಾರ್ಜ್ ಸುಧಾಕರ್ ಸೇರಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದವರ ವಿರುದ್ಧ ವಿದ್ಯಾರ್ಥಿ ನೀಡಿದ ದೂರಿನ ಅನ್ವಯ ಕೇಸ್ ದಾಖಲಿಸಿ ವಶಕ್ಕೆ ಪಡೆಯಲಾಗಿದೆ. ಬಿಎನ್ಎಸ್ ಸೆಕ್ಷನ್ 299, 302ರ ಅಡಿ ಮೊಕದ್ದಮೆ ದಾಖಲಿಸಲಾಗಿದೆ.

ಸಿಇಟಿ ಪರೀಕ್ಷೆ ಮೊದಲ ದಿನವೇ ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಯದೇ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ತಾಕೀತು ಮಾಡಿದ್ದರು. ಇದರಿಂದ ಅನಿವಾರ್ಯವಾಗಿ ವಿದ್ಯಾರ್ಥಿಗಳು ಜನಿವಾರವನ್ನು ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದರು. ಸುಮಾರು ಐವರು ವಿದ್ಯಾರ್ಥಿಗಳಿಗೆ ಸಿಬ್ಬಂದಿಗಳು ಜನಿವಾರ ತೆಗೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಘಟನೆ ಬೆನ್ನಲ್ಲೇ ಇಂದು ಪೋಷಕರು ಹಾಗೂ ಧಾರ್ಮಿಕ ಮುಖಂಡರು ಪರೀಕ್ಷಾ ಕೇಂದ್ರದ ಬಳಿ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಬಿತ್ತಿ ಪತ್ರ ಹಿಡಿದು ಪ್ರತಿಭಟಿಸಿದ್ದರು. ಪ್ರಕರಣ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಎಚ್ಚೆತ್ತ ಕೃಪಾನಿಧಿ ಕಾಲೇಜು ಆಡಳಿತ ಮಂಡಳಿ ಜನಿವಾರ ತೆಗೆಸಿದ್ದ ಮೂವರು ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡಿದೆ,

ಕೃಪಾನಿಧಿ ಕಾಲೇಜಿನ ಸಿಬ್ಬಂದಿಗಳಾದ ಸುಧಾಕರ್, ಗಿರಿಜಾ ಹಾಗೂ ಸರಿತಾ ಅವರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ. ತನಿಖೆ ವರದಿ ಬರುವವರೆಗೂ ಮುಂದಿನ ಆದೇಶದವರೆಗೆ ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular