HomeKarnatakaBREAKING : ತುಮಕೂರಿನಲ್ಲಿ ಘೋರ ದುರಂತ : ಕಾರು ಕೆರೆಗೆ ಬಿದ್ದು ಮೂವರು ಜಲಸಮಾಧಿ

BREAKING : ತುಮಕೂರಿನಲ್ಲಿ ಘೋರ ದುರಂತ : ಕಾರು ಕೆರೆಗೆ ಬಿದ್ದು ಮೂವರು ಜಲಸಮಾಧಿ

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಗೆ ಕಾರು ಬಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಬಳಿಯಿರುವ ರಾಮಲಿಂಗಪುರ ಕೆರೆಯಲ್ಲಿ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ದೊಡ್ಡಣ್ಣ, ಸಣ್ಣಮ್ಮ, ಯಮುನಾ ಎಂದು ಗುರುತಿಸಲಾಗಿದ್ದು, ಪ್ರವೀಣ್ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ವೀರಾಪುರ ಗ್ರಾಮದವರು, ಇಂದು ಬೆಳಗ್ಗೆ ಕಾರಿನಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದೆ. ಈ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular