HomeKarnatakaBREAKING : ಸಾಲಬಾ‍ಧೆ : ಹಾವೇರಿಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

BREAKING : ಸಾಲಬಾ‍ಧೆ : ಹಾವೇರಿಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಹಾವೇರಿ : ಸಾಲಬಾ‍ಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯ ಯಲವಿಗೆ ರೈಲು ನಿಲ್ದಾಣದ ಬಳಿ ನಡೆದಿದೆ.

ಸಾಲಬಾಧೆಯಿಂದ ಮನನೊಂದಿದ್ದ ಕುಟುಂಬ ಆತ್ಮಹತ್ಯೆಗೆ ಶರಣಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರನ್ನು ಗೋನಾಳ ಗ್ರಾಮದವರು ಎಂದು ಗುರುತಿಸಲಾಗಿದೆ.

ಮೊದಲು ರೈಲಿಗೆ ಸಿಲುಕಿ ಮಂಜುನಾಥ್ ತೇಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪುತ್ರನನ್ನು ರಕ್ಷಿಸಲು ಹೋಗಿ ರೇಣವ್ವ ಕೂಡ ಸಾವನ್ನಪ್ಪಿದ್ದಾಳೆ. ತಾಯಿ ಹಾಗೂ ಪುತ್ರನ ಸಾವಿನ ಸುದ್ದಿ ತಿಳಿದು ಸಾವಕ್ಕ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular