ಉಡುಪಿ: ಈಜಲು ಸಮುದ್ರಕ್ಕೆ ಇಳಿದ ಮೂವರು ಮೃತಪಟ್ಟಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಓರ್ವನನ್ನು ರಕ್ಷಣೆ ಮಾಡಲಾಗಿದೆ.
ಕುಂದಾಪುರ ತಾಲೂಕಿನ ಗೋಪಾಡಿ ಬೀಚ್ ನಲ್ಲಿ ಭಾನುವಾರ ಘಟನೆ ನಡೆದಿದೆ. ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿ ಬೀಚ್ ಗೆ ಬಂದಿದ್ದು, ಅವರಲ್ಲಿ 7 ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಟವಾಡುತ್ತಿದ್ದರು. ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, ಅವರಲ್ಲಿ ಮೂವರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಓರ್ವನನ್ನು ಸ್ಥಳೀಯರು ರಕ್ಷಿಸಿದ್ದು, ಗಂಭೀರ ಸ್ಥಿತಿಯಲ್ಲಿರುವ ಆತನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು, ಅಗ್ನಿಶಾಮಕ ಮತ್ತು ತುರ್ತುಸೇವೆ ಸಿಬ್ಬಂದಿ, ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
You Might Also Like
TAGGED:ಸಮುದ್ರ