ಬೆಳಗಾವಿ: ಮೂವರು ಯುವಕರ ಮೇಲೆ ತಲ್ವಾರ್ ನಿಂದ ದಾಳಿ ನಡೆಸಿದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ.
ವಲಿ ಶೇಕ್, ಇಮಾಮ್ ಶೇಕ್, ಮಜೀದ್ ಶೇಕ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಗೊಂಡ ಮೂವರು ಯುವಕರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

