BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಲಾರಿ ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು

ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕಲ್ಲಿಹಾಳ್-ಅರಹತೊಳಲು ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿಕಾಸ್ (18), ಯಶ್ವಂತ‌(17) ಶಶಾಂಕ (17) ಮೃತಪಟ್ಟ ದುರ್ದೈವಿಗಳು. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read