ಮೈಸೂರು: ಜಮೀನಿನಲ್ಲಿ ದನ ಮೇಯಿಸಲು ಹೋಗಿದ್ದ ರೈತ ಹುಲಿ ದಾಳಿಗೆ ಬಲಿಯಾದ ಘಟನೆ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿದೆ.
58 ವರ್ಷದ ರಾಜಶೇಖರ ಮೃತಪಟ್ಟವರು ಎಂದು ಹೇಳಲಾಗಿದೆ. ರಾಜಶೇಖರ ಅವರು ಜಮೀನಿನಲ್ಲಿ ಜಾನುವಾರು ಮೇಯಿಸುವಾಗ ಏಕಾಏಕಿ ಅವರ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿ ಸೆರೆಗೆ ಕಾರ್ಯಾಚರಣೆ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
