HomeKarnatakaBREAKING : ನಂಜನಗೂಡಿನಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ಹುಲಿ ಸೆರೆ

BREAKING : ನಂಜನಗೂಡಿನಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ಹುಲಿ ಸೆರೆ

ಮೈಸೂರು : ಮಹಿಳೆಯನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೊನೆಗೂ ಸೆರೆ ಹಿಡಿದಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಅರವಳಿಕೆ ಚುಚ್ಚು ಮದ್ದು ನೀಡಿ ಹುಲಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂಜನಗೂಡು ತಾಲ್ಲೂಕಿನ ಬಳ್ಳೂರು ಹುಂಡಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ದನ ಮೇಯಿಸುತ್ತಿದ್ದ ‌ರತ್ನಮ್ಮ (49) ಅವರ ಮೇಲೆ ಹುಲಿ ದಾಳಿ ನಡೆಸಿ ಕೊಂದಿದೆ. ಹುಲಿಯು ಮೃತ ದೇಹವನ್ನು 3 ಕಿ. ಮೀ ದೂರ ಎಳೆದೊಯ್ದು ಅರೆಬರೆ ತಿಂದು ಹೋಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular