HomeLatest NewsBREAKING: ತೆಲಂಗಾಣದಲ್ಲಿ ಭೀಕರ ಅಪಘಾತ: ಸಾರಿಗೆ ಬಸ್ ಮೇಲೆ ಟಿಪ್ಪರ್ ಮಗುಚಿ ಬಿದ್ದು 17 ಜನ...

BREAKING: ತೆಲಂಗಾಣದಲ್ಲಿ ಭೀಕರ ಅಪಘಾತ: ಸಾರಿಗೆ ಬಸ್ ಮೇಲೆ ಟಿಪ್ಪರ್ ಮಗುಚಿ ಬಿದ್ದು 17 ಜನ ಸಾವು

ಹೈದರಾಬಾದ್: ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 17 ಜನ ಸಾವನ್ನಪ್ಪಿದ್ದಾರೆ. ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮಗಚಿ ಬಿದ್ದು 17 ಜನ ಸಾವನ್ನಪ್ಪಿದ್ದಾರೆ. ಮಿರ್ಜಾಗೂಡ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ರಂಗಾರೆಡ್ಡಿ ಜಿಲ್ಲೆಯ ಚೇಬಳ್ಳ ತಾಲೂಕಿನ ಮಿರ್ಜಾಗೂಡ ಬಳಿ ಅಪಘಾತ ಸಂಭವಿಸಿದೆ. ಬಸ್ ಮೇಲೆ ಜಲ್ಲಿಕಲ್ಲು ತುಂಬಿದ್ದ ಟಿಪ್ಪರ್ ಮಗುಚಿಬಿದ್ದು ಅಪಘಾತ ಸಂಭವಿಸಿದೆ. ತೆಲಂಗಾಣದ ಸರ್ಕಾರಿ ಬಸ್ ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ 17 ಜನ ಸಾವ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಟಿಪ್ಪರ್ ಚಾಲಕನ ಅತಿವೇಗವೇ ಅಪಘಾತಕ್ಕೆ ಕಾರಣವಾಗಿದೆ. ಟಿಪ್ಪರ್ ಮಗುಚಿದ್ದರಿಂದ ಬಸ್ ನಲ್ಲಿ ಜಲ್ಲಿಕಲ್ಲುಗಳು ತುಂಬಿಕೊಂಡಿವೆ. ಗಾಯಗೊಂಡ ಹಲವರ ಸ್ಥಿತಿ ಚಿಂತಾಜನಕವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular